October 27, 2021

ಉದಯಪ್ರಭ

ಹೊಸ ಹುರುಪಿನ ಸಂಭ್ರಮ

ಡಿಕೆಶಿ ಕಲೆಕ್ಷನ್ ಗಿರಾಕಿ, ಸ್ಕ್ಯಾಮ್, ಕುಡುಕ ಎಂದದ್ದು ಸ್ವತಃ ಕಾಂಗ್ರೆಸಿಗರೆ !

ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸ್ವತಃ ಕಾಂಗ್ರೆಸ್ ಪಕ್ಷದ ನಾಯಕರ ಪಿಸು ಮಾತು ಈಗ ಪಕ್ಷದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ.

ಡಿಕೆಶಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ಅವರ ನಡುವೆ ನಡೆದ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂ ಗೆ ಗೇಟ್ ಪಾಸ್ ನೀಡಲಾಗಿದೆ.

ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನಾಲಿಸಿದ ಉಗ್ರಪ್ಪ ಅವರಿಂದ ವಿವರಣೆ ಪಡೆಯಲಾಗುವುದು ಎಂದು ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಸಲೀಂ ಮತ್ತು ಉಗ್ರಪ್ಪ ಅವರನ್ನು ಪಕ್ಷದಿಂದ ವಜಾ ಗೊಳಿಸಬೇಕೆಂದು ಡಿ.ಕೆ.ಶಿವಕುಮಾರ್ ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ.

ಡಿ.ಕೆ. ಶಿವಕುಮಾರ್ ಕಲೆಕ್ಷನ್ ಗಿರಾಕಿ. ಶಿವಕುಮಾರದ್ದು ದೊಡ್ಡ ಸ್ಕ್ಯಾಮ್ ಪಟ್ಟುಹಿಡಿದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿಸಿದ್ದು ನಾವು ಎಂದು ಹೇಳಿರುವ ಸಲೀಂ- ಉಗ್ರಪ್ಪ ನಡುವೆ ನಡೆದ ಮಾತುಗಳು ಬಹಿರಂಗವಾಗಿದೆ.

ಕರ್ನಾಟಕ ರಾಜಕೀಯದಲ್ಲಿ ಭ್ರಷ್ಟಾಚಾರ ಎಂಬುದು ಅವ್ಯಾಹತವಾಗಿ ನಡೆದು ಬಂದಿದೆ. ಇದು ಆಡಳಿತಾರೂಢ ಮತ್ತು ವಿಪಕ್ಷಗಳು ಎಂಬ ಭೇದಭಾವ ಇಲ್ಲದೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಸಲೀಂ- ಉಗ್ರಪ್ಪ ನಡುವೆ ಮಾತುಗಳು ರಾಜಕೀಯ ಬಿರುಗಾಳಿ ಎಬ್ಬಿಸಿವೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಪಕ್ಷ ಉಗ್ರ ವಾಗಿ ಟ್ವೀಟ್ ಮಾಡಿ ಕಾಂಗ್ರೆಸ್ಸನ್ನು ಕೆಣಕಿದೆ.