ಬೆಂಗಳೂರು :
ಚುನಾವಣೆ ಘೋಷಣೆ ಬಳಿಕ ರಾಜ್ಯದಲ್ಲಿ ದೊಡ್ಡ ಬೇಟೆ 9 ಕೋಟಿ ನಗದು, 9 ಲಕ್ಷ ರು. ಮೌಲ್ಯದ ಡೈಮಂಡ್ ವಶಪಡಿಸಿಕೊಳ್ಳಲಾಗಿದೆ.
ಕಾರ್ಯನಿರ್ವಹಿಸುತ್ತಿರುವ ವಿವಿಧ ತನಿಖಾ ತಂಡಗಳು 9.64 ಕೋಟಿ ರು. ನಗದು ಸೇರಿದಂತೆ 36.41 ಕೋಟಿ ರು. ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿವೆ. 15.67 ಲಕ್ಷ ರು. ಉಚಿತ ಉಡುಗೊರೆ, 1.63 ಕೋಟಿ ರು. ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ವಣಾಧಿಕಾರಿ ಕಚೇರಿ ತಿಳಿಸಿದೆ.
ಲೋಕಸಭಾ ಚುನಾವಣೆ ಘೋಷಣೆ ಬಳಿಕ ರಾಜ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಅಕ್ರಮ ಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ನೀತಿ ಸಂಹಿತೆ ಜಾರಿಯಾದ ಬಳಿಕ ಮೊದಲ ಬಾರಿಗೆ ಒಂಭತ್ತು ಲಕ್ಷ ರು. ಮೌಲ್ಯದ ವಜ್ರಗಳನ್ನು ಜಪ್ತಿ ಮಾಡಲಾಗಿದೆ.