ಮಂಗಳೂರು: ರಾಜ್ಯ ಸರ್ಕಾರವು 2025-26 ನೇ ಸಾಲಿನ ಬಜೆಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಬೇಕು. ಜಯದೇವ ಹೃದ್ರೋಗ ಆಸ್ಪತ್ರೆಯ ಘಟಕವನ್ನು ನಗರದಲ್ಲಿ ಸ್ಥಾಪಿಸಬೇಕು. ಜಿಲ್ಲೆಗೆ ಸರ್ಕಾರಿ ಕಾನೂನು ಕಾಲೇಜು ಮಂಜೂರು ಮಾಡಬೇಕು ಎಂಬುವುದೂ ಸೇರಿದಂತೆ 10 ಬೇಡಿಕೆಗಳನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮುಂದಿಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಬೇಡಿಕೆಗಳು :
ಪುತ್ತೂರು ಕೇಂದ್ರವನ್ನಾಗಿಟ್ಟುಕೊಂಡು ಹೊಸ ಜಿಲ್ಲೆಯನ್ನು ರಚಿಸಬೇಕು,ಮಂಗಳೂರಿನಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸಬೇಕು, ಕರಾವಳಿಯಲ್ಲಿ ಅಡಿಕೆ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಬೇಕು, ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ಸ್ಥಾಪಿಸಬೇಕು, ಮುಸ್ಲಿಂ ಧಾರ್ಮಿಕ ಗುರುಗಳಿಗೆ (ಮೌಲಾನಾ) ಉಸ್ತಾದ್ ವಸತಿ ಬಡಾವಣೆ ನಿರ್ಮಿಸಬೇಕು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ರೂ. 3 ಸಾವಿರ ಕೋಟಿ ಮೀಸಲಿಡಬೇಕು. ಜಿಲ್ಲೆಯಲ್ಲಿ ಬ್ಯಾರಿ ಅಭಿವೃದ್ಧಿ ನಿಗಮ ಮತ್ತು ಮಂಗಳೂರಿನಲ್ಲಿ ಬ್ಯಾರಿ ಭವನ ಸ್ಥಾಪಿಸಬೇಕು, ಜಿಲ್ಲೆಯಲ್ಲಿ ಭತ್ತ ಕೃಷಿ ಉತ್ತೇಜಿಸಲು ಎಕರೆಗೆ ರೂ. 2 ಲಕ್ಷ ಪ್ಯಾಕೇಜ್ ಘೋಷಿಸಬೇಕು, ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾಧಿತ ಅಡಿಕೆ ಕೃಷಿಗೆ ಬೆಂಬಲ ಬೆಲೆ ಘೋಷಿಸಬೇಕು.