ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆ. 5 ರಂದು ಗೋಕಾಕ, ಘಟಪ್ರಭಾ, ಕಾಗವಾಡ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ. ಕೃಷ್ಣಾ, ಘಟಪ್ರಭಾ ಸೇರಿದಂತೆ ಹಲವಾರು ನದಿಗಳ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಚಿವರು ಮತ್ತು ಅಧಿಕಾರಿಗಳು ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಅಂದು ಬೆಳಗ್ಗೆ 10:00ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 11:10ಕ್ಕೆ ಸಾಂಬ್ರಾ ವಿಮಾನಕ್ಕೆ ಆಗಮಿಸುವರು. ನಂತರ 12:15ಕ್ಕೆ ಘಟಪ್ರಭಾ ನದಿ ಪ್ರವಾಹಕ್ಕೆ ಸಿಲುಕಿ ನಲುಗಿರುವ ಗೋಕಾಕ ಪಟ್ಟಣದ ಪ್ರವಾಹ ಪೀಡಿತ ಪ್ರದೇಶ ಹಾಗೂ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. 1:45 ಕ್ಕೆ ಕೃಷ್ಣಾ ನದಿ ಪ್ರವಾಹಕ್ಕೆ ಒಳಗಾದ ಕಾಗವಾಡ ತಾಲೂಕಿನ ಜೂಗುಳ‌ ಗ್ರಾಮಕ್ಕೆ ಭೇಟಿ ನೀಡಲಿದ್ದು, ನಂತರ ಚಿಕ್ಕೋಡಿ ತಾಲೂಕಿನ ಮಾಂಜರಿ ಸೇತುವೆ ವೀಕ್ಷಣೆ ಮಾಡಲಿದ್ದಾರೆ. ಕಾಗವಾಡ ತಾಲೂಕಿನ ಜುಗೂಳ ಗ್ರಾಮ ಅದಾದ ಬಳಿಕ ಚಿಕ್ಕೋಡಿ ಮಾಂಜರಿಗೆ ತೆರಳಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಿಎಂ ಸಿದ್ದರಾಮಯ್ಯ ಬೆಳಗಾವಿಯ ಪ್ರವಾಸಿ ಮಂದಿರಕ್ಕೆ ಬಂದು ರಾತ್ರಿ ಬೆಂಗಳೂರಿಗೆ ತೆರಳಲಿದ್ದಾರೆ.

ದುರಂತಕ್ಕೀಡಾದ ವಯನಾಡ್ ನಲ್ಲಿ 100 ಮನೆಗಳ ನಿರ್ಮಾಣ: ಸಿಎಂ‌ ಸಿದ್ದರಾಮಯ್ಯ ಘೋಷಣೆ : ಕೇರಳ ಮುಖ್ಯಮಂತ್ರಿ ಜೊತೆಗೆ ಧೂರವಾಣಿ ಮೂಲಕ ಚರ್ಚಿಸಿದ ಸಿಎಂ ಸಿದ್ದರಾಮಯ್ಯ:

ಶಿರಾಡ್ ಘಾಟ್ : ಪ್ರವಾಹ ಪೀಡಿತ ವಯನಾಡ್ ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಧೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು.

ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ ಎಂದರು.

ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು.