ಬೆಳಗಾವಿ : ಕೇಂದ್ರ ಸರಕಾರದ ಪ್ರವಾಸೋದ್ಯಮ ಇಲಾಖೆಯ ಪ್ರಸಾದ ಯೋಜನೆಯಡಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಕೈಗೊಳ್ಳಲು 11 ಕೋಟಿ ಅನುದಾನ ಮಂಜೂರಾಗಿದೆ.

ಬೆಳಗಾವಿ ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಶುಕ್ರವಾರ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಗಳು ಕೈಗೊಳ್ಳಲು 11 ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರ ಮಂಜೂರಾತಿ ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸಾದ ಯೋಜನೆಯಡಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಆಯ್ಕೆ ಮಾಡುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರಿಗೆ ಮನವಿ ಮಾಡಲಾಗಿತ್ತು.