ನವದೆಹಲಿ: ಭಾರತದಲ್ಲಿ 12.9 ಕೋಟಿ ನಾಗರಿಕರು ತೀವ್ರ ಬಡತನದಲ್ಲಿ ಜೀವನ ನಡೆಸುತ್ತಿದ್ದಾರೆ ಎಂದು ವಿಶ್ವ ಬ್ಯಾಂಕ್ ವರದಿ ಹೇಳಿದೆ. ಆದರೆ 2021ಕ್ಕೆ ಹೋಲಿಸಿದರೆ ಈ ಪ್ರಮಾಣ 3.8 ಕೋಟಿಯಷ್ಟು ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್ ಅಂಕಿ ಅಂಶ ಹೇಳಿದೆ. ವರದಿ ಪ್ರಕಾರ, ಭಾರತದಲ್ಲಿ ಪ್ರಸ್ತಕ ವರ್ಷದಲ್ಲಿ 12.9 ಕೋಟಿ ಜನರು ದಿನಕ್ಕೆ 181 ರು.ಗಿಂತಲೂ ಕಡಿಮೆ ಆದಾಯ ವನ್ನು ಹೊಂದಿದ್ದಾರೆ. 2021ರಲ್ಲಿ ಭಾರತದಲ್ಲಿ ಬಡತ ನದ ಪ್ರಮಾಣ 16.7 ಕೋಟಿಯಷ್ಟಿತ್ತು. ಆದರೆ 2 ವರ್ಷಗಳಲ್ಲಿ ಈ ಪ್ರಮಾಣ 3.8 ಕೋಟಿಯಷ್ಟು ಇಳಿಕೆಯಾಗಿದೆ. ಈ ಪ್ರಮಾಣ ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗಲಿದೆ ಎಂದು ಹೇಳಿದೆ.