Join The Telegram | Join The WhatsApp |
ಬೆಳಗಾವಿ :
ಕೊಲ್ಲಾಪುರ ಜಿಲ್ಲೆಯ ರಾಜಾಪುರ ಬ್ಯಾರೇಜ್ ನಿಂದ ಕೃಷ್ಣಾ ನದಿಗೆ 1500 ಕ್ಯೂಸೆಕ್ ನೀರು ಶನಿವಾರ ಬಿಡುಗಡೆ ಮಾಡಲಾಗಿದೆ.
ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಕುಡಿಯುವ ನೀರು ಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರ ಸರಕಾರಕ್ಕೆ ಮನವಿ ಮಾಡಿದ್ದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಯವರಿಗೆ ಪತ್ರ ಮುಖೇನ ಮನವಿ ಮಾಡಿದ್ದ ಸಿದ್ದರಾಮಯ್ಯ ಅವರ ಮನವಿಗೆ ಸ್ಪಂದಿಸಿ 1500 ಕ್ಯೂಸೆಕ್ ನೀರನ್ನು ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮಾಡಿದೆ.
ಕೆಲ ದಿನಗಳ ಹಿಂದೆ ಪಕ್ಷಾತೀತವಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ನೀರು ಬಿಡುವಂತೆ ಜನಪ್ರತಿನಿಧಿಗಳು ಮನವಿ ಮಾಡಿದ್ದರು.
ಬತ್ತುವ ಹಂತ ತಲುಪಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ ಬಂದಂತಾಗಿದೆ. ನೀರಲ್ಲದೆ ಹೈರಾಣಾಗಿದ್ದ ಬೆಳಗಾವಿ ಜಿಲ್ಲೆಯ ನದಿ ತೀರದ ಜನ ನಿಟ್ಟುಸಿರು ಬಿಟ್ಟಿದ್ದಾರೆ.
Join The Telegram | Join The WhatsApp |