ಬೆಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಬೆಂಗಳೂರಿನಲ್ಲಿ ದೊಡ್ಡ ಅನಾಹುತ ಸಂಭವಿಸಿದೆ. ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಕಟ್ಟಡ ಕುಸಿದಿದ್ದು ಮೂವರು ಮೃತಪಟ್ಟು 16 ಕಾರ್ಮಿಕರು ಕಟ್ಟಡದ ಒಳಗೆ ಸಿಲುಕಿರುವ ಅನುಮಾನ ವ್ಯಕ್ತವಾಗಿದೆ. ಸಂಜೆ ನಾಲ್ಕು ಗಂಟೆ ನಂತರ ಈ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಲವು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.