ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಆಗುತ್ತಿದೆ. ರವಿವಾರ ಬೆಳಗ್ಗೆ 8:30 ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕ್ಯಾಸಲ್ ರಾಕ್ ನಲ್ಲಿ ರಾಜ್ಯದಲ್ಲಿಯೇ ಅಧಿಕ ಎನಿಸಿದ 21 ಸೆಂ.ಮೀ. ಮಳೆ ಸುರಿದಿದೆ. ಖಾನಾಪುರ ಮತ್ತು ಬೆಳಗಾವಿ ತಾಲೂಕಿನಲ್ಲಿ ಭಾರೀ ಮಳೆ ಬೀಳುತ್ತಿದೆ.