ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರದಿಂದ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಎಚ್ಚರಿಕೆ ನೀಡಿದ್ದು, ಜನರು ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ ಆದಷ್ಟು ಹೊರಗೆ ಹೋಗಬೇಡಿ ಎಂದು ಸಲಹೆ ನೀಡಿದೆ.
ಏಪ್ರಿಲ್‌ 26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಏಪ್ರಿಲ್‌ 27ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆಯಲ್ಲಿ ಬಿಸಿಗಾಳಿ ಸಾಧ್ಯತೆಯಿದೆ.

ಹಾಗೂ ಏಪ್ರಿಲ್‌ 28ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ಆರ್ದ್ರ ವಾತಾವರಣ ಇರುತ್ತದೆ. ಒಟ್ಟಾರೆಯಾಗಿ, ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ದಾಟಿದಾಗ ಅಥವಾ ನಿರ್ದಿಷ್ಟ ಜಿಲ್ಲೆಯ ತಾಪಮಾನವು ಸಾಮಾನ್ಯಕ್ಕಿಂತ 4.5 ಡಿಗ್ರಿ ಸೆಲ್ಸಿಯಸ್ ಹೆಚ್ಚಾದಾಗ ಹೀಟ್ ವೇವ್ ಅಲರ್ಟ್ ನೀಡಲಾಗುವುದು ಎಂದು ತಿಳಿಸಲಾಗಿದೆ.