5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್ ಪರೀಕ್ಷೆಗೆ ಸಂಬಂಧಿಸಿ ರಾಜ್ಯ ಹೈಕೋರ್ಟ್‌ನ ಏಕಸದಸ್ಯ ಪೀಠವು ಪಬ್ಲಿಕ್ ಪರೀಕ್ಷೆಗೆ ವಿಧಿಸಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ತೆರವುಗೊಳಿಸಿದೆ. ಹೀಗಾಗಿ ಮಾರ್ಚ್ 11ರ ಸೋಮವಾರದಿಂದ ಆರಂಭವಾಗಬೇಕಾಗಿದ್ದ ಬೋರ್ಡ್ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ.
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಬೋರ್ಡ್ ಎಕ್ಸಾಂ ಸುತ್ತೋಲೆಯನ್ನು ಎರಡು ದಿನಗಳ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆಗಳು ಮೇಲ್ಮನವಿ ಸಲ್ಲಿಸಿದ್ದವು. ಇದೀಗ ವಿಭಾಗೀಯರ ಪೀಠವು ತಡೆಯಾಜ್ಞೆಗೇ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಪರೀಕ್ಷೆಗಳು ಪಬ್ಲಿಕ್ ಎಕ್ಸಾಂ ಮಾದರಿಯಲ್ಲೇ ಯಥಾವತ್ತಾಗಿ ನಡೆಯಲಿದೆ.
ಬೆಂಗಳೂರು : ರಾಜ್ಯದ 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗಳಿಗೆ ಅನುಮತಿ ನೀಡಿ ವಿಭಾಗೀಯ ಹೈಕೋರ್ಟ್ ಪೀಠ ಹಸಿರು ನಿಶಾನೆ ತೋರಿದೆ.
2023ರ ಡಿಸೆಂಬರ್‌ನಲ್ಲಿ ಬೋರ್ಡ್ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ರುಪ್ಪಾ ಸಂಘಟನೆಯು ಹೈಕೋರ್ಟ್ ಮೊರೆ ಹೋಗಿತ್ತು. ಈ ಕಾರಣದಿಂದ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಿ ಆದೇಶಿಸಿತ್ತು. ಇದೀಗ ಆ ಆದೇಶಕ್ಕೆ ವಿಭಾಗೀಯ ಪೀಠ ತಡೆ ಹಿಡಿದಿದೆ.
ಇಂದು ಪೀಠ ಹೇಳಿದ್ದೇನು ?
ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿ ಹಿಡಿದಿದೆ. ನಿನ್ನೆಯಷ್ಟೇ 5,8,9,11 ತರಗತಿಗಳ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದು ಮಾಡಿ ಆದೇಶ ನೀಡಿತ್ತು. ಆದರೆ ಈ ಕುರಿತು ಮೇಲ್ಮನವಿ ಸಲ್ಲಿಕೆಯಾಗಿದ್ದ ಕಾರಣ ಇಂದು ವಿಚಾರಣೆ ನಡೆಸಿದ ವಿಭಾಗೀಯ ಪೀಠ ನಿನ್ನೆ ಏಕದಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದೆ.
ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ 2023ರ ಅ.6 ಮತ್ತು 9ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಆದರೆ ಈ ಸುತ್ತೋಲೆಯನ್ನು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ’ (ರುಪ್ಸಾ) ಹಾಗೂ ‘ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ’ (ಅವರ್ ಸ್ಕೂಲ್ಸ್) ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ ಹೊಸಮನಿ ಅವರ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ಸುತ್ತೋಲೆಯನ್ನು ರದ್ದು ಮಾಡಿ ಮಹತ್ವದ ತೀರ್ಪು ನೀಡಿತ್ತು.
ಆದರೆ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ವಿಭಾಗೀಯ ಪೀಠ ಸರ್ಕಾರದ ಸುತ್ತೋಲೆಯನ್ನು ಎತ್ತಿಹಿಡಿದಿದೆ. ಬೋರ್ಡ್ ಪರೀಕ್ಷೆಗೆ ಅನುಮತಿ ನೀಡುವ ಮೂಲಕ ಏಕಸದಸ್ಯ ನೀಡಿದ ಆದೇಶಕ್ಕೆ ತಡೆ ನೀಡಿದೆ.