ಬೆಂಗಳೂರು: ರಾಜ್ಯ ಪಠ್ಯಕ್ರಮದ 5,8 ಮತ್ತು 9ನೇ ತರಗತಿಗಳ ಮೌಲ್ಯಾಂಕನ ಮೌಲ್ಯ ಮಾಪನವನ್ನು ಏ.2ರ ಒಳಗೆ ಪೂರ್ಣಗೊಳಿಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಸೂಚಿಸಿದೆ. 5ನೇ ತರಗತಿಯ ಪರೀಕ್ಷೆಗಳು ಮಂಗಳವಾರ ಮುಕ್ತಾಯ ಗೊಂಡಿದ್ದು, 8 ಮತ್ತು 9ನೇ ತರಗತಿಯ ಪರೀಕ್ಷೆಗಳು ಗುರುವಾರ (ಮಾ.28) ಮುಕ್ತಾಯಗೊಳ್ಳುತ್ತವೆ. ವಿಷಯ ವಾರು ಕೀ ಉತ್ತರಗಳ ಪ್ರತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಗಳ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಬ್ಲಾಕ್ ಹಂತದಲ್ಲಿ ಅಂತರ ಕ್ಲಸ್ಟರ್‌ವಾರು ಮೌಲ್ಯಮಾಪನ ಕಾರ್ಯವನ್ನು ಮಾಡಬೇಕು ಎಂದು ಸೂಚಿಸಲಾಗಿದೆ. ಸಮುದಾಯದತ್ತ ಶಾಲೆ ಕಾರ್ಯಕ್ರಮ ದಿನದಂದು ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡಬೇಕು ಎಂದು ಮಂಡಳಿ ಅಧ್ಯಕ್ಷರು ಸೂಚಿಸಿದ್ದಾರೆ.