ಬೆಳಗಾವಿ :
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ-ಮಂಗ್ಯಾನಕೊಪ್ಪ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.

 

ಘಟನೆಯಲ್ಲಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಎಸ್ಪಿ ಭೀಮಶಂಕರ್ ಗುಳೇದ ಸ್ಥಳಕ್ಕೆ ತೆರಳಿದ್ದಾರೆ.

ಮಹಾರಾಷ್ಟ್ರದ ಪಾಸಿಂಗ್ ಇರುವ ಕಾರು ಇದಾಗಿದೆ. ಮೃತ ದೇಹಗಳನ್ನು ಕಾರಿನಿಂದ ಹೊರತೆಗೆಯಲು ಪ್ರಯಾಸ ಪಡಬೇಕಾಯಿತು. ಸಂಪೂರ್ಣ ಛಿದ್ರಗೊಂಡಿದೆ. ಕಾರಿನಲ್ಲಿ ಒಟ್ಟು ಒಂಬತ್ತು ಜನ ಪ್ರಯಾಣ ಬೆಳೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಿದೆ.