ಬೆಳಗಾವಿ : ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ಜಮೀನು ವಿವಾದ ತಾರಕಕ್ಕೇರಿದ ಪರಿಣಾಮ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಈ ಘಟನೆಯಲ್ಲಿ ಏಳು ಜನ ಗಾಯಗೊಂಡಿದ್ದಾರೆ.

ಎರಡು ಕಡೆಯವರು ಕುಡುಗೋಲು, ದೊಣ್ಣೆ ಮುಂತಾದ ಸಾಧನಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದು ಸ್ಥಳೀಯರು ಈ ದೃಶ್ಯವನ್ನು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದಾರೆ.

ಕಾಕತಿ ಗ್ರಾಮದ ಅನಿಲ್ ಮುಂಗಾರಿ ಸೇರಿದಂತೆ ಒಟ್ಟು ಏಳು ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾವು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಸಿದ್ದರಾಯಿ ತುಂಬರಿ ಅವರು ನಮ್ಮ ಕುಟುಂಬದವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಅನಿಲ್ ಮುಂಗಾರಿ ಆರೋಪಿಸಿದ್ದು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.