
ಬೆಂಗಳೂರು: ಸಮಗ್ರ ಬೆಂಗಳೂರಿನ ಆಡಳಿತ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲು ಹಾಗೂ ಬಿಬಿಎಂಪಿಯ ವ್ಯಾಪ್ತಿಯನ್ನು ಹಿಗ್ಗಿಸಿ ಏಳು ನಗರ ಪಾಲಿಕೆಗಳನ್ನು ಸೃಜಿಸಲು ಅವಕಾಶ ಕಲ್ಪಿಸುವ ‘ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2025’ಕ್ಕೆ ವಿಧಾನಸಭೆಯು ಸೋಮವಾರ ಅಂಗೀಕಾರ ನೀಡಿದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇದನ್ನು ತೀವ್ರವಾಗಿ ಟೀಕಿಸಿದ್ದಾರೆ.
ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ!! 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ Divide and Rule ಎಂದು ಎಕ್ಸ್ ಪೋಸ್ಟ್‌ನಲ್ಲಿ ಕಿಡಿಕಾರಿದ್ದಾರೆ.
ಅಂದು ಅಖಂಡ ಭಾರತವನ್ನು ಹೋಳು ಮಾಡಿತು! ಇಂದು: ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ. ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದು ಇದರ ಹಿಂದಿನ ದುರುದ್ದೇಶವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.
ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ. ಅದರ ಉದ್ದೇಶ ಕೊಳ್ಳೆ ಹೊಡೆಯುವುದಷ್ಟೇ..ಅಧಿಕಾರ, ಅಭಿವೃದ್ಧಿ ವಿಕೇಂದ್ರೀಕರಣವಲ್ಲ, ಇದು ಲೂಟಿಯ ವಿಕೇಂದ್ರೀಕರಣ ಎಂದು ಟೀಕಿಸಿದ್ದಾರೆ.
ಲೂಟಿಕೋರರಾದ ಮಹಮ್ಮದ್ ಘಜ್ಜಿ, ಮೊಹಮದ್ ಘೋರಿ ಸಂಪದ್ಭರಿತ ಭಾರತವನ್ನು ಲೂಟಿಗೈದರು. ಬೆಂಗಳೂರಿಗೆ ಈಗೊಬ್ಬ ಘಜ್ಜಿ, ಘೋರಿ ವಕ್ಕರಿಸಿದ್ದಾನೆ. ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ!! 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ Divide and Rule ಎಂದು ಎಕ್ಸ್ ಪೋಸ್ಟ್‌ನಲ್ಲಿ ಕಿಡಿಕಾರಿದ್ದಾರೆ.
ಅಂದು ಅಖಂಡ ಭಾರತವನ್ನು ಹೋಳು ಮಾಡಿತು!
ಇಂದು: ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ. ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದು ಇದರ ಹಿಂದಿನ ಉದ್ದೇಶ ಎಂದು ಅವರು ಬರೆದುಕೊಂಡಿದ್ದಾರೆ.