Join The Telegram | Join The WhatsApp |
ಹೈದರಾಬಾದ್:
ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಟಿಡಿಪಿ (TDP) ರ‍್ಯಾಲಿ ವೇಳೆ ಕಾಲ್ತುಳಿತ ಉಂಟಾಗಿ 8 ಜನರು ಸಾವನ್ನಪ್ಪಿರುವಂತಹ ಘಟನೆ ನೆಲ್ಲೂರು ಕ್ಷೇತ್ರದ ವ್ಯಾಪ್ತಿಯ ಕಂದುಕೂರಿನಲ್ಲಿ ನಡೆದಿದೆ.
ಮಾಜಿ ಸಿಎಂ ಚಂದ್ರಬಾಬು ನಾಯ್ಡು ಟಿಡಿಪಿ ಬಹಿರಂಗ ಸಭೆ ಆಯೋಜಿಸಿದ್ದರು. ಈ ವೇಳೆ ಏಕಾಏಕಿ ವೇದಿಕೆ ಹತ್ತಿರ ನೂಕುನುಗ್ಗಲು ಉಂಟಾಗಿದ್ದು, 8 ಜನ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.
ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ:
ಘಟನೆ ಕುರಿತಾಗಿ ಚಂದ್ರಬಾಬು ನಾಯ್ಡು ಬೇಸರ ವ್ಯಕ್ತಪಡಿಸಿದ್ದು, ಮುಗ್ಧ ಜನರು ಸಾಯುತ್ತಿರುವುದು ದುಃಖದ ಸಂಗತಿ. ನಾವು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಂತ್ರಸ್ತರ ಪರವಾಗಿ ನಿಲ್ಲುತ್ತೇವೆ ಎಂದು ಹೇಳಿದ್ದಾರೆ. ಜೊತೆಗೆ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರವನ್ನು ಚಂದ್ರಬಾಬು ನಾಯ್ಡು ಘೋಷಣೆ ಮಾಡಿದ್ದಾರೆ. ಚಂದ್ರಬಾಬು ನಾಯ್ಡು ಆಸ್ಪತ್ರೆಗೆ ಹೋಗಿ ಗಾಯಾಳುಗಳನ್ನು ಭೇಟಿಯಾಗಿದ್ದಾರೆ. ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಲ್ಲಿ ಮನವಿಮಾಡಿಕೊಂಡಿದ್ದಾರೆ.
Join The Telegram | Join The WhatsApp |