ಬೆಳಗಾವಿ: ವಿದ್ಯುತ್ ತಂತಿ ತಗುಲಿ ರೈತನೊಬ್ಬ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಿರೇನಂದಿಹಳ್ಳಿ ಗ್ರಾಮದ ರೈತ ಹಾಗೂ ಪಿಕೆಪಿಎಸ್ ಸದಸ್ಯ ಮಂಜುನಾಥ ನೀಲಪ್ಪ ದಾಸನಕೊಪ್ಪ ಮೃತಪಟ್ಟ ರೈತ. ತಮ್ಮ ಜಮೀನಿನಲ್ಲಿ ಟ್ರಾಕ್ಟರ್‌ನಿಂದ ಉಳುಮೆ ಮಾಡುತ್ತಿರುವ ಸಂದರ್ಭದಲ್ಲಿ ರೈತ ಮಂಜುನಾಥನ ಕೈಗೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನಿಗೆ ತಂದೆ, ತಾಯಿ, ಪತ್ನಿ, ಪುತ್ರ ಇದ್ದಾರೆ.