ಬೆಂಗಳೂರು : ಸರ್ಕಾರಿ ಶಾಲಾ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಹೇಳಿಕೊಡಲು ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿದೆ. ಸರ್ಕಾರಿ ಶಾಲೆ ಮಕ್ಕಳನ್ನು ಇಂಗ್ಲೀಷ್ ಭಾಷೆಯಲ್ಲಿ ಪರಿಣಿತರನ್ನಾಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸ್ಪೋಕನ್ ಇಂಗ್ಲೀಷ್ ತರಗತಿ ಪರಿಚಯಿಸಲಿದೆ. ಇಂಗ್ಲೀಷ್ನಲ್ಲಿ ಮಾತನಾಡುವುದು, ಸಂಭಾಷಣೆ ನಡೆಸುವುದು, ಕತೆ ಹೇಳುವುದು ಸೇರಿ ದಿನನಿತ್ಯ ಇಂಗ್ಲೀಷ್ ಮಾತನಾಡುತ್ತಲೇ ಆ ಭಾಷೆಯನ್ನು ಸುಲಭವಾಗಿ ಮನದಟ್ಟು ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.