ಬೆಂಗಳೂರು: ಜೂನ್‌ 3ರಂದು ‌ವಿಧಾನಸಬೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಹೈಕಮಾಂಡ್‌ ಈಗಾಗಲೇ ಅಂತಿಮಗೊಳಿಸಿದ್ದು, ಇದರಲ್ಲಿ ಸುಮಲತಾ ಅಂಬರೀಶ್‌ ಹೆಸರು ಪ್ರಮುಖವಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿಯಿಂದ ಮೂವರಿಗೆ ಟಿಕೆಟ್ ಫೈನಲ್ ಆಗಿದ್ದು, ಇಂದು ಸಂಜೆ ಅಧಿಕೃತ ಘೋಷಣೆ ಆಗಲಿದೆ ಎಂದು ತಿಳಿದುಬಂದಿದೆ. ಸಂಸದೆ ಸುಮಲತಾ ಅಂಬರೀಶ್, ಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ಎಂ. ನಾಗರಾಜು ಅವರಿಗೆ ಪರಿಷತ್ ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. ಇಂದು ಸಂಜೆ ಈ ವಿಚಾರವನ್ನು ಹೈಕಮಾಂಡ್‌ ಘೋಷಿಸಲಿದೆ ಎಂದು ಹೇಳಲಾಗಿದೆ.