ಬೆಂಗಳೂರು: ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಡಾ.ಶಾಲಿನಿ ರಜನೀಶ್ ಅವರನ್ನು ಅಭಿವೃದ್ಧಿ ಆಯುಕ್ತರ ನೇಮಕ ಮಾಡಲಾಗಿದೆ.

ಕರ್ನಾಟಕದ ಮತ್ತೊಬ್ಬ ಹಿರಿಯ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರು ಮೇ 31 ರಂದು ನಿವೃತ್ತರಾದ ಹಿನ್ನೆಲೆಯಲ್ಲಿ ತೆರವಾದ ಈ ಹುದ್ದೆಗೆ ಡಾ.ಶಾಲಿನಿ ರಜನಿ ಅವರನ್ನು ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದ ಆಡಳಿತಾಂಗದಲ್ಲಿ ಶಾಲಿನಿ ರಜನೀಶ್ ಮುಖ್ಯ ಕಾರ್ಯದರ್ಶಿ ನಂತರ ಎರಡನೇ ಸ್ಥಾನದಲ್ಲಿ ಇರಲಿದ್ದಾರೆ. ಪ್ರಸ್ತುತ, ಯೋಜನೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.