ಚಿಕ್ಕಬಳ್ಳಾಪುರ : ಭೀಕರ ಕಾರು ಅಪಘಾತ ಸಂಭವಿಸಿದ್ದು ಕಾರು ಕಾಲುವೆಗೆ ಬಿದ್ದು ಮೂವರು ಮೃತಪಟ್ಟಿದ್ದಾರೆ. ಒಬ್ಬರ ಶವ ಮರದಲ್ಲಿ ನೇತಾಡುತ್ತಿರುವುದು ಕಂಡುಬಂದಿದ್ದು ಇದನ್ನು ಬೆಳಗ್ಗೆ ನೋಡಿದ ನಾಗರಿಕರೇ ಬೆಚ್ಚಿಬಿದ್ದಿದ್ದಾರೆ.
ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ಗುರುತಿಸಲಾಗಿದೆ.ಮೃತರನ್ನು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ. ಕೆಪಿಟಿಸಿಎಲ್ ನ ವೇಣುಗೋಪಾಲ್( 34), ಶ್ರೀಧರ್ (35),ಬೆಸ್ಕಾಂ ಲೈನ್ ಮ್ಯಾನ್ ಮಂಜಪ್ಪ (35)ಎಂದು ಗುರುತಿಸಲಾಗಿದೆ. ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಪರಿಣಾಮ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ. ಗೌರಿಬಿದನೂರು ತಾಲೂಕಿನ ವಾಟದ ಹೊಸಹಳ್ಳಿ ಬಳಿ ಈ ದುರ್ಘಟನೆ ನಡೆದಿದೆ. ರಾತ್ರಿ ಅಪಘಾತ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿದೆ. ಕಾರಿನಲ್ಲಿ ನಾಲ್ವರು ಇದ್ದು ಮೂವರು ಮೃತಪಟ್ಟಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.