ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಹೆಬ್ರಿ ಇಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮದ ಅಂಗವಾಗಿ ನಡೆದ ಅಮೃತ ವಾಹಿನಿ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ರಾಷ್ಟ್ರೀಯ ಕಾರ್ಯ ಕಾರಿಣಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರು ಕುಟುಂಬ ಪ್ರಭೋಧನೆ ಮತ್ತು ಭಾರತೀಯ ಜ್ಞಾನ ಪರಂಪರೆ ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡಿದರು.
ಭಾರತದಲ್ಲಿ ಈಗ ಗಂಡ-ಹೆಂಡತಿ ಮತ್ತು ಒಂದು ಮಗು ಜೊತೆಗಿದ್ದರೆ ಕುಟುಂಬ ಎನ್ನುವಂತಾಗಿದೆ. ಆದರೆ, ನಿಜವಾದ ಕುಟುಂಬ ಎಂದರೆ ಎರಡು-ಮೂರು ತಲೆಮಾರು ಒಟ್ಟಿಗೆ ಇರುವುದು. ಕುಟುಂಬದ ಸದಸ್ಯರೆಲ್ಲ ಒಟ್ಟಾಗಿ ಕುಳಿತು ಭಜನೆ ಮಾಡುವ, ಊಟ ಮಾಡುವ, ಚರ್ಚೆ ಮಾಡುವ ಕುಟುಂಬ ಪದ್ಧತಿಯಿಂದ ನಮ್ಮ ಸಂಸ್ಕೃತಿ ಸಂಸ್ಕಾರದ ವರ್ಗಾವಣೆ ಆಗುತ್ತದೆ ಎಂದರು.
ಟ್ರಸ್ಟ್ ನ ಕಾರ್ಯದರ್ಶಿ ಗುರುದಾಸ್ ಶೆಣೈ , ಟ್ರಸ್ಟಿಗಳಾದ ಬಾಲಕೃಷ್ಣ ಮಲ್ಯ , ವಿಷ್ಣುಮೂರ್ತಿ ನಾಯಕ್ ಪ್ರಾಂಶುಪಾಲ ಅಮರೇಶ್ ಹೆಗ್ಡೆ , ಉಪನ್ಯಾಸಕರು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕ ಸುಹಾಸ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.