ದೆಹಲಿ : ಮುಂದಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವರ್ಷಕ್ಕೆ ಎರಡು ಬಾರಿ ವಿದ್ಯಾರ್ಥಿಗಳಿಗೆ ಅಡ್ಮಿಷನ್ (ಪ್ರವೇಶ ಕಲ್ಪಿಸಲು) ಕಲ್ಪಿಸಲು ವಿಶ್ವವಿದ್ಯಾಲಯ ಧನಸಹಾಯ ನಿರ್ಧರಿಸಿದೆ.

ಪ್ರವೇಶಗಳು ಈಗ ಜನವರಿ, ಫೆಬ್ರವರಿ ಮತ್ತು ಜುಲೈ, ಆಗಸ್ಟ್‌ನಲ್ಲಿ ನಡೆಯಲಿವೆ. ಬೋರ್ಡ್ ಫಲಿತಾಂಶಗಳಲ್ಲಿನ ವಿಳಂಬ, ಆರೋಗ್ಯ ಸಮಸ್ಯೆಗಳು ಅಥವಾ ವೈಯಕ್ತಿಕ ಕಾರಣಗಳಿಂದಾಗಿ ಆರಂಭಿಕ ಪ್ರವೇಶ ಪ್ರಕ್ರಿಯೆಯನ್ನು ತಪ್ಪಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ನೀಡಲು ಈ ಕ್ರಮ ಕೈಗೊಳ್ಳಲಾಗಿದೆ.

ಈ ಕುರಿತು ಮಾಹಿತಿ ಪ್ರಕಟಿಸಿದ ಯುಜಿಸಿ ಅಧ್ಯಕ್ಷ ಪ್ರೊಫೆಸರ್ ಮಾಮಿಡಾಲ ಜಗದೀಶ್ ಕುಮಾ‌ರ್, ಎರಡು ಬಾರಿ ಪ್ರವೇಶ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳು ಶೈಕ್ಷಣಿಕ ದಾಖಲಿಗಾಗಿ ಕಾಯುವ ಸಮಯವನ್ನು ಕಡಿಮೆ ಮಾಡಲಾಗುವುದು. ಆ ಮೂಲಕ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ಕಲ್ಪಿಸಲಾಗುವುದು ಎಂದು ವಿವರಿಸಿದ್ದಾರೆ.

ಇದು ಕೈಗಾರಿಕೆಗಳಿಗೆ ವರ್ಷಕ್ಕೆ ಎರಡು ಬಾರಿ ಕ್ಯಾಂಪಸ್ ನೇಮಕ ಮಾಡಲು ಅನುವು ಮಾಡಿಕೊಡುತ್ತದೆ, ಪದವೀಧರರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

ಈ ಹಿಂದೆ, ಯುಜಿಸಿ ಮುಕ್ತ ಮತ್ತು ದೂರಶಿಕ್ಷಣ (ಒಡಿಎಲ್) ಮತ್ತು ಆನ್‌ಲೈನ್ ವಿಧಾನಗಳಿಗೆ ವರ್ಷಕ್ಕೆ ಎರಡು ಬಾರಿ ಪ್ರವೇಶಕ್ಕೆ ಅನುಮತಿ ನೀಡಿತ್ತು. ಇದರ ಪರಿಣಾಮವಾಗಿ ಸುಮಾರು 5 ಲಕ್ಷ ಹೆಚ್ಚುವರಿ ವಿದ್ಯಾರ್ಥಿಗಳು ಅವಕಾಶ ಪಡೆದಿದ್ದರು. ಈ ಯಶಸ್ಸಿನಿಂದ ಉತ್ತೇಜಿತರಾದ ಯುಜಿಸಿ ಈ ನೀತಿಯನ್ನು ನಿಯಮಿತ ಕಾರ್ಯಕ್ರಮಗಳಿಗೆ ವಿಸ್ತರಿಸಿತ್ತು.

ಈ ಬದಲಾವಣೆಯು ಭಾರತೀಯ ವಿಶ್ವವಿದ್ಯಾಲಯಗಳನ್ನು ಜಾಗತಿಕವಾಗಿ ಚಾಲ್ತಿಯಲ್ಲಿರುವ ವ್ಯವಸ್ಥೆಗೆ ಪೂರಕವಾಗಿದೆ. ಅಂತಾರಾಷ್ಟ್ರೀಯ ಸಹಯೋಗ ಮತ್ತು ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಕ್ಕೂ ಪ್ರೇರಣೆ ನೀಡುತ್ತದೆ.

ವರ್ಷಕ್ಕೆ ಎರಡು ಪ್ರವೇಶವು ಒಟ್ಟು ದಾಖಲಾತಿ ಅನುಪಾತ ಹೆಚ್ಚಿಸುತ್ತದೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ರಲಿ ಕಲ್ಪಿಸಿದಂತೆ ಭಾರತವನ್ನು ಜಾಗತಿಕ ತಾಣವನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ.