ಬೆಂಗಳೂರು: ನಟ ದರ್ಶನ್ ಸ್ನೇಹಿತೆ ಆಗಿರುವ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಕರೆಸಿ ಹಲ್ಲೆ ಮಾಡಿ ಹತ್ಯೆಗೈದಿರುವ ಆರೋಪ ಕೇಳಿಬಂದಿದೆ. ಈ ಕೇಸ್‌ನಲ್ಲಿ ನಟ ದರ್ಶನ್ ಸೇರಿ 13 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ. ಈ ಪ್ರಕರಣದ ಕುರಿತಾಗಿ ಒಂದೊಂದೆ ವಿಚಾರಗಳು ತನಿಖೆಯಿಂದ ಹೊರ ಬರುತ್ತಿವೆ ಎನ್ನಲಾಗಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್‌ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ದರ್ಶನ್‌ಗಿಂತ ನಾನೇನು ಕಡಿಮೆ ಬಾ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದ ಪವನ್‌ಗೆ ಹೇಳಿದ್ದರು. ಈ ವಿಚಾರ ದರ್ಶನ್‌ಗೆ ತಿಳಿದಿದೆ.

ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್‌ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.