ಬೆಂಗಳೂರು : ನಟ ದುನಿಯಾ ವಿಜಯ್ ಪತ್ನಿ ನಾಗರತ್ನ ಅವರೊಂದಿಗಿನ ವಿಚ್ಛೇದನಕ್ಕಾಗಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಅವರು ಬೆಂಗಳೂರಿನ ಶಾಂತಿ ನಗರ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಆರೋಪ ಸಾಬೀತುಪಡಿಸಲು ವಿಫಲವಾದ ಹಿನ್ನೆಲೆಯಲ್ಲಿ ಆ ಅರ್ಜಿಯನ್ನು ನ್ಯಾಯಾಧೀಶರು ವಜಾಗೊಳಿಸಿದ್ದಾರೆ. 2018ರಲ್ಲಿ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಅರ್ಜಿ ಸಲ್ಲಿಸಿದ್ದರು. ಸುಮಾರು 6 ವರ್ಷಗಳಿಂದ ಈ ವಿಚಾರಣೆ ನಡೆಯುತ್ತಿದೆ.

ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು ಅರ್ಜಿ ಸಲ್ಲಿಸಿದ್ದರು. 2018ರಲ್ಲಿಯೇ ಅರ್ಜಿ ಸಲ್ಲಿಸಲಾಗಿದ್ದು, ಈಗ ವಜಾ ಆಗಿದೆ. ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಇದನ್ನು ಸಾಬೀತುಪಡಿಸಲು ವಿಫಲವಾದ ಕಾರಣ ಅರ್ಜಿ ವಜಾ ಆಗಿದೆ. ಬೆಂಗಳೂರಿನ ಶಾಂತಿನಗರ ಕೌಟುಂಬಿಕ ನ್ಯಾಯಾಲಯ ಆದೇಶ ನೀಡಿದೆ.