ಬೆಳಗಾವಿ: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸ.ಕ.ನಾ ವಿಜ್ಞಾನ ಕೇಂದ್ರ, ಶ್ರೀ ಸಿದ್ಧರಾಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ, ಬೆಳಗಾವಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಜಿಲ್ಲಾ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಸಿದ್ಧರಾಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜೂ. 14 ರಂದು ಬೆಳಗ್ಗೆ 11 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಪ್ರಶಸ್ತಿ ವಿತರಣಾ ಸಮಾರಂಭ ಆಯೋಜಿಸಲಾಗಿದೆ.
ಬೆಳಗಾವಿ ನಾಗನೂರು ರುದ್ರಾಕ್ಷಿಮಠದ ಪೂಜ್ಯ ಶ್ರೀ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು, ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪಿ.ಮುರುಳಿ ಮನೋಹರ ರೆಡ್ಡಿ ಅವರು ಪ್ರಶಸ್ತಿ ಪ್ರದಾನ ಮಾಡುವರು, ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ಬಿ.ಹಿರೇಮಠ ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಲಯ ಹಿರಿಯ ಪರಿಸರ ಅಧಿಕಾರಿ ಗೋಪಾಲಕೃಷ್ಣ ಸಣತಂಗಿ, ಉಪಾಧ್ಯಕ್ಷರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ಜಿಲ್ಲಾ ಮುಖ್ಯ ಆಯುಕ್ತ ಗಜಾನನ ಮನ್ನಿಕೇರಿ, ಶ್ರೀ ಸಿದ್ಧರಾಮೇಶ್ವರ ಪದವಿ ಮೂರ್ವ ಮಹಾವಿದ್ಯಾಲಯ ಪ್ರಾಚಾರ್ಯ ಸಿದ್ದರಾಮ ರೆಡ್ಡಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಶೋಭಾ ಪೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.