ವಿವಾಹ ವಾರ್ಷಿಕೋತ್ಸವ ಪ್ರಯುಕ್ತ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ಹರೀಶ ಪೂಂಜ ಒಂದೇ ದಿನ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ವಿವಾಹ ವಾರ್ಷಿಕೋತ್ಸವ. ನಿನ್ನೆ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಬೆಂಗಳೂರಿನಲ್ಲಿದ್ದ ಕಾರಣ ದೇವಸ್ಥಾನಕ್ಕೆ ಭೇಟಿ ನೀಡಿರಲಿಲ್ಲ. ಹೀಗಾಗಿ ಇಂದು ಕೋಟ ಶ್ರೀನಿವಾಸ ಪೂಜಾರಿ ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದಿದ್ದಾರೆ. ಇಂದು ಬೆಳ್ತಂಗಡಿ ಶಾಸಕ ಹರೀಶ ಪೂಂಜಾ ಅವರ ವಿವಾಹ ವಾರ್ಷಿಕೋತ್ಸವದ ದಿನ. ಹರೀಶ ಪೂಂಜಾ ದಂಪತಿ ಕುಟುಂಬ ಸಮೇತ ಇಂದು ಬೆಳಗ್ಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.ದೇವಸ್ಥಾನದಲ್ಲಿ ಪರಸ್ಪರ ಶುಭ ಕೋರಿದ ಸಂಸದರು ಮತ್ತು ಶಾಸಕರು ಜೊತೆಯಾಗಿ ದೇವರ ದರ್ಶನ ಪಡೆದಿದ್ದಾರೆ.