ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಪವಿತ್ರಾಗೌಡ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಗೆ  ವೈದ್ಯರು ಬಂದಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಪವಿತ್ರಾಗೌಡಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.