ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 10ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ದೇಶದ ವಿವಿಧ ಭಾಗಗಳಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಸುಮಾರು 7 ಸಾವಿರಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದರು.ಈ ಬಾರಿ ಜಮ್ಮು ಮತ್ತು ಕಾಶ್ಮೀರದ ದಾಲ್ ಸರೋವರದ ದಡದಲ್ಲಿ ಯೋಗ ದಿನ ಆಚರಿಸಲು ನಿರ್ಧರಿಸಲಾಗಿದೆ. ಮುಖ್ಯ ಕಾರ್ಯಕ್ರಮವು ಶ್ರೀನಗರದ ಶೇರ್-ಇ-ಕಾಶ್ಮೀರ್ ಅಂತರರಾಷ್ಟ್ರೀಯ ಸಮ್ಮೇಳನ ಕೇಂದ್ರದಲ್ಲಿ ನಡೆಯಲಿದೆಪಿಟಿಐ ಜೊತೆ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಯೋಗ ದಿನದಂದು ಕಾಶ್ಮೀರ ಕಣಿವೆಗೆ ಮೋದಿ ಅವರು ಆಗಮಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ’ ಎಂದರು.ಪ್ರಧಾನಿ ಮೋದಿ ಅವರು ಕಾಶ್ಮೀರದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದ್ದು, ಅದಕ್ಕಾಗಿಯೇ ಶ್ರೀನಗರದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ನಿರ್ಧರಿಸಿದ್ದಾರೆ. ಜೂನ್ 21ರಂದು ಸುಮಾರು 7 ಸಾವಿರ ಜನ ಮೋದಿ ಅವರೊಂದಿಗೆ ದಾಲ್ ಸರೋವರದ ದಡದಲ್ಲಿ ಯೋಗ ಮಾಡಲಿದ್ದಾರೆ’ ಎಂದು ಸಿನ್ಹಾ ಹೇಳಿದರು.