ಧರ್ಮಸ್ಥಳ : ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಇಂದು ಬೆಳಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ನಂತರ ದೇವಾಲಯದಲ್ಲಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಯಡಿಯೂರಪ್ಪನವರನ್ನು ಗೌರವಿಸಿದರು.

ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ಬಹಳ ವರ್ಷಗಳ ನಂತರ ಸ್ನೇಹಿತರ ಜೊತೆ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ನಮ್ಮೂರಲ್ಲಿ ಬರಗಾಲ, ಊರಲ್ಲಿ ಮಳೆಯಾಗಿ ಸಮೃದ್ಧಿಯಿಂದ ಬೆಳೆಯಾಗಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸಿದ್ದೇನೆ. ವೀರೇಂದ್ರ ಹೆಗ್ಗಡೆಯವರ ಜೊತೆಗೆ ದೇವರ ದರ್ಶನ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದಿದ್ದಾರೆ.