ನವದೆಹಲಿ: ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸದ್ಯ ರಾಜ್ಯಸಭೆಯ ಸಭಾನಾಯಕರಾಗಿರುವ ಪಿಯೂಷ್ ಗೋಯಲ್ ಅವರ ಕಚೇರಿಯಲ್ಲಿ ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಪ್ರಲ್ಲಾದ ಜೋಶಿ ಅವರೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ನಡ್ಡಾ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿದ್ದಾರೆ.