ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅತ್ಯಂತ ಸೊಗಸಾಗಿ ಬ್ಯಾಟಿಂಗ್ ನಡೆಸಿದ್ದು ವಿಶ್ವದಲ್ಲೇ ಅಗ್ರಸ್ಥಾನ ಅಲಂಕರಿಸಿದ್ದರು. ಇದೀಗ ಅವರು ಟಿ20 ವಿಶ್ವಕಪ್ ನಲ್ಲಿ ಭಾರತಕ್ಕೆ ಅಮೋಘ ಜಯ ತಂದು ಕೊಟ್ಟಿದ್ದಾರೆ. ಜೊತೆಗೆ ತಮ್ಮ t20 ವಿಶ್ವಕಪ್ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.ವಿಶ್ವ ಕಪ್ ಪಂದ್ಯವನ್ನು ಗೆದ್ದ ನಂತರ ಇದು ತಮ್ಮ ಕೊನೆಯ ಟಿ 20 ವಿಶ್ವಕಪ್ ಎಂದು ಘೋಷಣೆ ಮಾಡಿದ್ದಾರೆ. ಈಗ ಮುಂದಿನ ಪೀಳಿಗೆಗೆ ಭಾರತೀಯ ಕ್ರಿಕೆಟ್ ಅನ್ನು ತೆಗೆದುಕೊಂಡು ಹೋಗುವ ಸಮಯ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಭಾರತ ಇಂದು ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಪರಸ್ಪರ ಅಪ್ಪಿಕೊಂಡು ಅಳಲು ಪ್ರಾರಂಭಿಸಿದರು. ಒಟ್ಟಾರೆ 140 ಕೋಟಿ ಜನಸಂಖ್ಯೆಯ ಭಾರತ ಎರಡನೇ ಬಾರಿಗೆ ವಿಶ್ವಕಪ್ ಗೆದ್ದಿರುವುದು ಎಲ್ಲರ ಸಂತಸಕ್ಕೆ ಕಾರಣವಾಗಿದೆ. ಭಾರತ ತಂಡದ ಪ್ರತಿಯೊಬ್ಬ ಆಟಗಾರರು ಪಂದ್ಯ ಗೆದ್ದ ನಂತರ ಆನಂದ ಭಾಷ್ಪ ಸುರಿಸಿದರು. ವಿಶ್ವ ಕಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಮೋಘ 76 ರನ್‌  ಸಿಡಿಸಿದ್ದಾರೆ ಈ ಮೂಲಕ ಭಾರತದ ಗೆಲುವಿಗೆ ಕಾರಣರಾಗಿದ್ದಾರೆ.

ಸರಣಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಕೊಹ್ಲಿ ಫೈನಲ್ ಪಂದ್ಯದಲ್ಲಿ ಅಮೋಘ ಆಟವಾಡಿ 76(59 ಎಸೆತ) ರನ್ ಗಳಿಸಿದ್ದರು.
ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ 35 ರ ಹರೆಯದ ಕೊಹ್ಲಿ ”ಇದನ್ನೇ ನಾವು ಸಾಧಿಸಲು ಬಯಸಿದ್ದೆವು. ದೇವರು ದೊಡ್ಡವನು.ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆವು. ಇದು ಬಹಿರಂಗ ರಹಸ್ಯವಾಗಿತ್ತು.ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ. ಐಸಿಸಿ ಟೂರ್ನಮೆಂಟ್ ಗೆಲ್ಲಲು ನಾವು ಕಾಯುತ್ತಿದ್ದೇವೆ. ನೀವು ರೋಹಿತ್‌ನಂತಹವರನ್ನು ನೋಡಿ, ಅವರು 9 ಟಿ20 ವಿಶ್ವಕಪ್‌ಗಳನ್ನು ಆಡಿದ್ದಾರೆ ಮತ್ತು ಇದು ನನ್ನ ಆರನೇ ವಿಶ್ವಕಪ್. ಅವರು ಅದಕ್ಕೆ ಅರ್ಹರು. ಭಾವನೆಗಳನ್ನು ಹಿಡಿದಿಟ್ಟುಕೊಳ್ಳುವುದು ಕಷ್ಟಕರವಾಗಿದೆ ಮತ್ತು ಅದು ನಂತರ ಮುಳುಗುತ್ತದೆ ಎಂದು ನಾನು ಭಾವಿಸುತ್ತೇನೆ. ಇದು ಅದ್ಭುತ ದಿನ ಮತ್ತು ನಾನು ಕೃತಜ್ಞನಾಗಿದ್ದೇನೆ’ ಎಂದು ಸಂಭ್ರಮದಲ್ಲೇ ವಿದಾಯ ಹೇಳಿದ್ದಾರೆ.
ಕೊಹ್ಲಿ ತಮ್ಮ 125ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ. ಈ ಟಿ 20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ 59 ಎಸೆತಗಳಲ್ಲಿ 76 ರನ್ ಮಾಡುವ ಮೊದಲು ಏಳು ಇನ್ನಿಂಗ್ಸ್‌ಗಳಲ್ಲಿ ಕೇವಲ 75 ರನ್ ಮಾತ್ರ ಗಳಿಸಿದ್ದರು.