ರಾಂಚಿ: ಅಕ್ರಮ ಹಣ ವರ್ಗಾವಣೆ , ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳಿಂದ ಬಂಧಿತರಾಗಿ, ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್ ಮತ್ತೆ ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಹಾಲಿ ಸಿಎಂ ಚಂಪೈ ಸೊರೆನ್‌ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹೇಮಂತ್‌ ಸೊರೆನ್‌ ಅವರು ಮೂರನೇ ಬಾರಿಗೆ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಹೇಮಂತ್‌ ಸೊರೆನ್‌ ಅವರ ಬಂಧನವಾದ ಬಳಿಕ ಅವರ ಆಪ್ತ ಚಂಪೈ ಸೊರೆನ್‌ ಅವರು ಫೆಬ್ರವರಿ 2ರಂದು ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜಾರ್ಖಂಡ್ ಮುಕ್ತಿ ಮೋರ್ಚಾ, ಕಾಂಗ್ರೆಸ್ ಮತ್ತು ಲಾಲು ಪ್ರಸಾದ್‌ ಯಾದವ್ ಅವರ ರಾಷ್ಟ್ರೀಯ ಜನತಾ ದಳದ ಆಡಳಿತಾರೂಢ ಮೈತ್ರಿಕೂಟವು ಹೇಮಂತ್‌ ಸೊರೆನ್‌ ಅವರು ಮತ್ತೆ ಸಿಎಂ ಆಗಲು ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.