ಬೆಂಗಳೂರು: 2024ರ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಫಲಿತಾಂಶ ಇಂದು (ಬುಧವಾರ) ಪ್ರಕಟಗೊಂಡಿದೆ. ಶೇಕಡ 31.02ರಷ್ಟು ಮಕ್ಕಳು ತೇರ್ಗಡೆಯಾಗಿದ್ದಾರೆ.ಫಲಿತಾಂಶವನ್ನು ಮಂಡಳಿಯ ಜಾಲತಾಣ https: //karresults.nic.in 2 ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ.ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಜೂನ್ 14ರಿಂದ 22ರವರೆಗೆ ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. 1.44 ಲಕ್ಷ ಬಾಲಕರು, 79,148 ಬಾಲಕಿಯರು ಸೇರಿದಂತೆ 2.23 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು.