ಬೆಳಗಾವಿ : ಜಮಖಂಡಿಯ ಬಿಎಲ್‌ಡಿಎಸ್ ಕಾನೂನು ಮಹಾವಿದ್ಯಾಲಯ ಆಯೋಜಿಸಿದ್ದ ಕೆಎಸ್‌ಎಲ್‌ಯು ಅಂತರಕಾಲೇಜು ಚೆಸ್ ಪಂದ್ಯಾವಳಿಯಲ್ಲಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜು ವಿದ್ಯಾರ್ಥಿಗಳು ಪ್ರಥಮ ಬಹುಮಾನ ಮತ್ತು ಟ್ರೋಫಿ ಪಡೆದರು. ಪಂದ್ಯಾವಳಿಯಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ 18ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಮಹಿಳಾ ವಿಭಾಗದಲ್ಲಿ ಅನುಷಾ ಮಮದಾಪುರ ಪಂದ್ಯಾವಳಿಯ ಆಟಗಾರ್ತಿ ಪ್ರಶಸ್ತಿ ಪಡೆದರು.ಆರ್.ಎಲ್. ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಕುಲಕರ್ಣಿ, ಕಾಲೇಜಿನ ಪ್ರಾಂಶುಪಾಲ ಡಾ.ಎ.ಎಚ್.ಹವಾಲ್ದಾರ್, ಜಿಮಖಾನಾ ಚೇರ್ಮನ್ ಡಾ.ಪ್ರಸನ್ನಕುಮಾರ, ಕಾಲೇಜಿನ ದೈಹಿಕ ನಿರ್ದೇಶಕ ಪ್ರೊ.ಅಮಿತ್ ಬಿ.ಜಾಧವ, ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ತಂಡವನ್ನು ಅಭಿನಂದಿಸಿದ್ದಾರೆ.