ಮಂಗಳೂರು : ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದರು. ಅರ್ಚಕ ಗೋಪಾಲಕೃಷ್ಣ ಉಪಾಧ್ಯಾಯ ಪ್ರಸಾದ ನೀಡಿದರು.ನಂತರ ರಾಹುಲ್ ಮೂಲ್ಕಿ ಸೀಮೆಯ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನಕ್ಕೆ ಹಾಗೂ ಕಕ್ವಗುತ್ತು ಮೂಲ ನಾಗನ ಕ್ಷೇತ್ರಕ್ಕೆ ಭೇಟಿ ನೀಡಿದರು.ಬಪ್ಪನಾಡು ಕ್ಷೇತ್ರದ ಆಡಳಿತ ಮೊಕೇಸರ ಮನೋಹರ ಶೆಟ್ಟಿ, ಕೆ ಎಲ್ ರಾಹುಲ್ ಪತ್ನಿ ಬಾಲಿವುಡ್ ನಟಿ ಅತಿಯಾ ಶೆಟ್ಟಿ, ನಟ ಅಹನ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ, ಅಶ್ವಿನ್ ಆಳ್ವ ಕುಬೆವೂರು ಉಪಸ್ಥಿತರಿದ್ದರು.ಖ್ಯಾತ ಕ್ರಿಕೆಟಿಗ ಕೆ ಎಲ್ ರಾಹುಲ್ ಪತ್ನಿ ಅತಿಯಾ ಶೆಟ್ಟಿ ಅವರ ತಂದೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಮೂಲತಃ ಮೂಲ್ಕಿಯವರಾಗಿದ್ದು ನಟ ಸುನಿಲ್ ಶೆಟ್ಟಿ ಅಳಿಯನಾಗಿ ಮೂಲ್ಕಿಗೆ ಪ್ರಥಮ ಭೇಟಿ ಇದಾಗಿದೆ.ರಾಹುಲ್ ಆಗಮಿಸುತ್ತಲೇ ಅಭಿಮಾನಿಗಳ ದಂಡು ಕ್ಷೇತ್ರದಲ್ಲಿ ಸೆಲ್ಪಿಗಾಗಿ ಮುಗಿಬಿದ್ದರು. ಶಿಮಂತೂರು ಕ್ಷೇತ್ರದಲ್ಲಿ ಸಣ್ಣ ಮಕ್ಕಳು ಬ್ಯಾಟಿನಲ್ಲಿ ಹಾಗೂ ಪುಸ್ತಕದಲ್ಲಿ ಅವರ ಹಸ್ತಾಕ್ಷರ, ಫೋಟೋ ತೆಗೆಸಿ ಸಂಭ್ರಮಿಸಿದರು.ಅಭಿಮಾನಿಗಳ ಜೊತೆ ತುಳುವಿನಲ್ಲಿ ಮಾತನಾಡಿ ಮನ ಗೆದ್ದ ಕೆ ಎಲ್ ರಾಹುಲ್ ರವರಿಗೆ ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಅಭಿಮಾನಿಗಳು ಶುಭ ಹಾರೈಸಿದರು.