ಹೊಸನಗರ: ಹೊಸನಗರ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 16 (ಮಂಗಳವಾರ)ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಸಿಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.