ಬೆಂಗಳೂರು: ಪ್ರತಿ ಜಿಲ್ಲೆಯಲ್ಲೂ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವುದಾಗಿ ಸಚಿವ ಡಾ.ಶರಣಬಸವ ಪಾಟೀಲ್ ತಿಳಿಸಿದ್ದಾರೆ.ವಿಧಾನ ಪರಿಷತ್ತಿನಲ್ಲಿ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವ ಉದ್ದೇಶ ಇದೆಯೇ ಎಂಬ ಪ್ರಶ್ನೆಯನ್ನು ಸರಕಾರದ ಮುಂದಿಟ್ಟರು. ಇದಕ್ಕೆ ಉತ್ತರಿಸಿದ ಸಚಿವರು, ಎಲ್ಲ ಜಿಲ್ಲೆಗಳಲ್ಲೂ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವ ಉದ್ದೇಶವನ್ನು ಸರಕಾರ ಹೊಂದಿದೆ ಎಂದು ಉತ್ತರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಉಡುಪಿ ಜಿಲ್ಲೆಯ ಕುಂದಾಪುರ ಅಥವಾ ಬೈಂದೂರು ಭಾಗದಲ್ಲಿ ಹೊಸ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಿ ಎಂದು ಮಂಜುನಾಥ ಭಂಡಾರಿ ಸರಕಾರಕ್ಕೆ ಸಲಹೆ ನೀಡಿದರು.