ಉಡುಪಿ: ಸೋಮವಾರ ನಸುಕಿನಲ್ಲಿ ಉಡುಪಿ ಬಾರ್ ಮಾಲಕರ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲೀಕರ ಪತ್ನಿ ಅಶ್ವಿನಿ ಶೆಟ್ಟಿ (47)ಚಿಕಿತ್ಸೆ ಫಲಿಸದೇ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರ ಪತಿ ರಮಾನಂದ ಶೆಟ್ಟಿ ಸೋಮವಾರ ಮೃತಪಟ್ಟಿದ್ದರು. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಅಶ್ವಿನಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕವಾಗಿ ಕ್ರಿಯಾಶೀಲರಾಗಿದ್ದರು. ಉಡುಪಿ ಬಿಜೆಪಿ ನಗರ ಮಹಿಳಾ ಘಟಕದ ಅಧ್ಯಕ್ಷರಾಗಿದ್ದರು. ಬಂಟರ ಸಂಘದ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದರು. ಜೊತೆಗೆ ತುಳುನಾಡಿದ ಆಚಾರ- ವಿಚಾರಗಳನ್ನು ಬಿಂಬಿಸುವ ವಿಡಿಯೋಗಳನ್ನು ಪ್ರಸ್ತುತಪಡಿಸಿ ಖ್ಯಾತಿ ಗಳಿಸಿದ್ದರು.