ಮಂಗಳೂರು: ಜುಲೈ 18ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂಬ ನಕಲಿ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಎಫ್ಐಆರ್ ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ ಜುಲೈ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸುವವರ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸುವವರ ಮೇಲೆ ಎಫ್ ಐಆರ್ ದಾಖಲಿಸಲು ಅವರು ಸೂಚನೆ ನೀಡಿದ್ದಾರೆ.