ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜು.18 ರ ಗುರುವಾರ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಅದರಂತೆಯೇ ಉತ್ತರ ಕನ್ನಡದ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ, ಯಲ್ಲಾಪುರ, ಚಿಕ್ಕಮಗಳೂರಿನ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಸೇರಿ ಒಟ್ಟು 5 ತಾಲೂಕು, ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ತಾಲೂಕಿನಲ್ಲಿ ನಾಳೆ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆ :
ಕೆಲ ದಿನಗಳಿಂದ ಹೊಸನಗರ, ಸಾಗರ, ಸೊರಬ ಹಾಗೂ ತೀರ್ಥಹಳ್ಳಿ ತಾಲೂಕುಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 18ರಂದು (ಗುರುವಾರ) ಅಂಗನವಾಡಿಯಿಂದ ಪಿಯುಸಿ ವರೆಗೆ ಈ ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಿ ತಹಸೀಲ್ದಾರರು ಆದೇಶ ಹೊರಡಿಸಿದ್ದಾರೆ.