ಭಾರತ ಕ್ರಿಕೆಟ್ ತಂಡದ ಅತ್ಯಂತ ಯಶಸ್ವಿ ಆಟಗಾರ ಎನಿಸಿಕೊಂಡಿರುವ ಸೂರ್ಯಕುಮಾರ ಯಾದವ್ ಇತ್ತೀಚಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ನಿ ದೇವಿಕಾ ಶೆಟ್ಟಿ ಅವರೊಂದಿಗೆ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ನಂತರ ಪತ್ನಿಯ ತವರು ಊರು ಕಾಪುವಿಗೆ ಆಗಮಿಸಿದ್ದರು. ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅಲ್ಲಿನ ಅರ್ಚಕರು ಸೂರ್ಯ ಕುಮಾರ ಯಾದವ್ ಅವರಿಗೆ ಭಾರತ ಕ್ರಿಕೆಟ್ ತಂಡದ ನಾಯಕರಾಗುವ ಭಾಗ್ಯ ದೊರಕಲಿ ಎಂದು ಹಾರೈಸಿ ಪ್ರಸಾದ ನೀಡಿದ್ದರು. ಇದೀಗ ಸೂರ್ಯ ಅವರು ಭಾರತ ಕ್ರಿಕೆಟ್ ತಂಡದ ನಾಯಕನಾಗಿ ಆಯ್ಕೆಯಾಗಿರುವುದು ವಿಶೇಷ.

ಮುಂಬೈ : ಭಾರತ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯ ಕುಮಾರ್ ಯಾದವ್ ಅವರಿಗೆ ಇದೀಗ ಭಾರತೀಯ ಕ್ರಿಕೆಟ್ ತಂಡದ ಸಾರಥ್ಯ ವಹಿಸುವ ಅವಕಾಶ ಲಭಿಸಿದೆ. ಕರಾವಳಿ ಮೂಲದ ದೇವಿಕಾ ಶೆಟ್ಟಿ ಅವರನ್ನು ಮದುವೆಯಾಗಿರುವ ಸೂರ್ಯಕುಮಾರ್ ಯಾದವ್ ಕರುನಾಡ ಅಳಿಯ. ಕಳೆದ ವಾರವಷ್ಟೇ ಅವರು ಉಡುಪಿ ಕಾಪು ಮಾರಿಗುಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು. ಇದರ ಬೆನ್ನಿಗೆ ಇದೀಗ ಭಾರತ ಕ್ರಿಕೆಟ್ ತಂಡಕ್ಕೆ ಅವರು ನಾಯಕತ್ವ ವಹಿಸುವ ಅವಕಾಶ ಲಭಿಸಿದೆ.

ರೋಹಿತ್ ಶರ್ಮಾ ಅವರು ಟಿ ಟ್ವೆಂಟಿ ಕ್ರಿಕೆಟ್‌ಗೆ ನಿವೃತ್ತಿ ಹೇಳಿರುವ ಹಿನ್ನೆಲೆಯಲ್ಲಿ ಇದುವರೆಗೆ ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಪಟ್ಟ ಕಟ್ಟುವ ಕುರಿತು ಚರ್ಚೆ ನಡೆದಿದ್ದವು. ಆದರೆ, ಸದಾ ಗಾಯಗೊಂಡು ತಂಡದಿಂದ ಹೊರಗಿರುವ ಕಾರಣಕ್ಕೆ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯ ಕುಮಾರ್ ಯಾದವ್ ಅವರಿಗೆ ಭಾರತೀಯ ಕ್ರಿಕೆಟ್ ತಂಡದ ಜವಾಬ್ದಾರಿ ಸಿಕ್ಕಿರುವುದು ವಿಶೇಷವಾಗಿದೆ.

 

ಇದೇ ತಿಂಗಳ 27ರಿಂದ ಶ್ರೀಲಂಕಾ ವಿರುದ್ಧ ನಡೆಯಲಿರುವ 3 ಟಿ20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಸೂರ್ಯ ಕುಮಾ‌ರ್ ಯಾದವ್‌ಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ.

ಟಿ20 ಪಂದ್ಯಗಳು ಜುಲೈ 26, 27, 29ರಂದು ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಗಸ್ಟ್ 1, 4 ಹಾಗೂ 7ರಂದು ಕೊಲಂಬೊದಲ್ಲಿರುವ ಆ‌ರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎಲ್ಲಾ ಪಂದ್ಯಗಳಲ್ಲಿ ಬಿಳಿ ಚೆಂಡನ್ನು ಬಳಸುತ್ತಿರುವುದು ವಿಶೇಷ.
ಉಭಯ ತಂಡಗಳು ನೂತನ ತರಬೇತುದಾರರನ್ನು ಹೊಂದಿದ್ದು, ಪಂದ್ಯ ಕುತೂಹಲ ಪಡೆದುಕೊಂಡಿದೆ. ಭಾರತ ತಂಡಕ್ಕೆ ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿ ನೇಮಕಗೊಂಡ ನಂತರ ಚೊಚ್ಚಲ ಪಂದ್ಯ ಇದಾಗಿದೆ. ಶ್ರೀಲಂಕಾ ತಂಡಕ್ಕೆ ಸನತ್ ಜಯಸೂರ್ಯ ಕೋಚ್ ಆಗಿ ಇತ್ತೀಚೆಗೆ ನೇಮಕಗೊಂಡಿದ್ದಾರೆ.

ಶುಭಮನ್‌ ಗಿಲ್ ಅವರಿಗೆ ತಂಡದ ಉಪನಾಯಕನ ಪಟ್ಟ ನೀಡಲಾಗಿದೆ. ವಿಜಯ ಹಜಾರೆ ಟ್ರೋಫಿಯಲ್ಲಿ ಏಳು ಬಾರಿ ಅರ್ಧ ಶತಕ ಗಳಿಸಿದ ರಿಯಾನ್ ಪರಾಗ್, ದೆಹಲಿಯ ವೇಗದ ಬೌಲರ್ ಹರ್ಷಿತ್ ರಾಣಾ ಈ ಪ್ರವಾಸದಲ್ಲಿ ಆಡುತ್ತಿರುವ ಹೊಸ ಮುಖಗಳು.

ಟಿ20 ತಂಡ ಹೀಗಿದೆ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಟ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯಾ, ಶಿವಂ ದುಬೆ, ಅಕ್ಸರ್ ಪಟೇಲ್ ವಾಷಿಂಗ್ಟನ್ ಸುಂದರ್ ವಿ ಬಿಸೋಯಿ

50 ಓವರ್ ಪಂದ್ಯ:
ಸ್ಟಾ‌ರ್ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರು 50 ಓವರ್‌ಗಳ ಪಂದ್ಯದಲ್ಲಿ ಆಡಲಿದ್ದಾರೆ. ಈ ತಂಡದಲ್ಲಿ ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ರಿಶಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಐಯ್ಯರ್, ಅರ್ಶದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಸರ್ ಪಟೇಲ್, ಖಲೀಲ್ ಅಹ್ಮದ್‌, ಹರ್ಷಿತ್ ರಾಣಾ ಇದ್ದಾರೆ.