ಹೆಬ್ರಿ: ಚಾರ ಜವಾಹರ ನವೋದಯ ವಿದ್ಯಾಲಯದ 2025-26ನೇ ಸಾಲಿನ ಶೈಕ್ಷಣಿಕ ವರ್ಷದ 6ನೇ ಆ ತರಗತಿಯಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 5ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ತಾವು ಓದುತ್ತಿರುವ ಶಾಲೆಯ ಮುಖ್ಯ ಶಿಕ್ಷಕರಿಂದ ಅವಶ್ಯಕ ದಾಖಲೆಗಳನ್ನು ಪಡೆದು ಸಮೀಪದ ಇಂಟರ್ನೆಟ್ ಸೈಬರ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಭಾವಚಿತ್ರ, ಆಧಾರ್, ಶಾಲಾ ಮುಖ್ಯ ಶಿಕ್ಷಕರಿಂದ ಡೌನ್ಲೋಡ್ ಮಾಡಿದ ಪ್ರಮಾಣಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಸೆ.16 ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ. ಮಾಹಿತಿಗಾಗಿ ವಿದ್ಯಾಲಯದ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.