ಬೆಳಗಾವಿ : ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಎಲ್ಲಾ ವರ್ಗದ ಜನತೆಗೆ ಆದ್ಯತೆ ನೀಡಲಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಪ್ರತಿಕ್ರಿಯೆ ನೀಡಿದ್ದಾರೆ. ಬಜೆಟ್‌ನಲ್ಲಿ ಎಲ್ಲಾ ಕ್ಷೇತ್ರದ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ವಿಶೇಷ ಆದ್ಯತೆಗಳನ್ನು ಪ್ರಕಟಿಸಿದ್ದಾರೆ. ಕೃಷಿ ವಲಯದಲ್ಲಿ ಉತ್ಪಾದಕತೆ, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಅಂತರ್ಗತ ಆದ್ಯತೆ ಮತ್ತು ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡಿದ್ದಾರೆ. ಉತ್ಪಾದನೆ ಮತ್ತು ಸೇವೆಗಳು, ನಗರಾಭಿವೃದ್ಧಿ, ಮೂಲ ಸೌಕರ್ಯ, ನಾವೀನ್ಯತೆ ಮತ್ತು ಸಂಶೋಧನೆಗೆ ಒತ್ತು ನೀಡಲಾಗಿದೆ. ಮುಂದಿನ ಪೀಳಿಗೆಯ ಸುಧಾರಣೆಗಳು ಅಡಕಗೊಂಡಿವೆ. ಇದು ಎಲ್ಲರನ್ನೂ ಒಳಗೊಂಡ ಬಜೆಟ್. ವಿಶೇಷವಾಗಿ ಬಡವರು, ಮಹಿಳೆಯರು, ವಿದ್ಯಾವಂತರ ಪಾಲಿನ ಆಶಾಕಿರಣವಾಗಿರುವ ಬಜೆಟ್ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ.