ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ಗುರುವಾರ(ಜುಲೈ 25) ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ದ್ವಿತೀಯ ಪಿಯುಸಿ ವರೆಗೆ ಶಾಲಾ-ಕಾಲೇಜುಗಳು ರಜೆ ಇರಲಿದೆ. ಈ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರರು ರಜೆ ಘೋಷಣೆ ಮಾಡಿದ್ದಾರೆ.