ಮಂಗಳೂರು : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಶೃಂಗೇರಿ ದೇವಸ್ಥಾನದಂತೆ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಇತ್ತೀಚಿಗೆ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಜಾರಿ ಮಾಡಿದ್ದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ಧರಿಸಿ ಬರಬೇಕು ಎಂದು ಪ್ರಕಟಣೆ ನೀಡಿದ್ದು ಇದನ್ನು ವಿಶ್ವ ಹಿಂದೂ ಪರಿಷದ್ ಸ್ವಾಗತಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಶೃಂಗೇರಿ ಮಠದಲ್ಲಿ ಜಾರಿಗೊಳಿಸಿದ ವಸ್ತ್ರ ಸಂಹಿತೆ ಮಾದರಿಯನ್ನು ಮುಂದಿನ ದಿನಗಳಲ್ಲಿ ಕರ್ನಾಟಕದ ಎಲ್ಲಾ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಮತ್ತು ಧಾರ್ಮಿಕ ದತ್ತಿ ಇಲಾಖೆ ಒಳಪಟ್ಟ ದೇವಾಲಯಗಳಿಗೆ ಆಗಮಿಸುವ ಭಕ್ತರಿಗೆ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಅವರು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.