ಹೆಬ್ರಿ: ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 26ರ ಶುಕ್ರವಾರ ರಜೆಯನ್ನು ಘೋಷಿಸಿ ತಹಸೀಲ್ದಾರರು ಆದೇಶ ಹೊರಡಿಸಿದ್ದಾರೆ.
ಕುಂದಾಪುರ, ಬೈಂದೂರು ಸೂಚನೆ :
ಗಾಳಿ ಮಳೆಯಿಂದ ತರಗತಿ ನಡೆಸಲು ಅನಾನುಕೂಲವಾಗುತ್ತಿದ್ದಲ್ಲಿ, ಅಥವಾ ಮಳೆ ಜೋರಾಗಿದ್ದಲ್ಲಿ ಮುಖ್ಯ ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಮತ್ತು ಶಾಲಾ ಪರಿಸ್ಥಿತಿ ನೋಡಿಕೊಂಡು ರಜೆ ನೀಡಲು ಬಿಇಒಗಳಿಗೆ ಕುಂದಾಪುರ ಹಾಗೂ ಬೈಂದೂರಿನ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.
ಹೊಸನಗರ ರಜೆ ಘೋಷಣೆ:
ವ್ಯಾಪಕ ಪ್ರಮಾಣದಲ್ಲಿ ಹೊಸನಗರ ತಾಲೂಕಿನಲ್ಲಿ ಮಳೆಯಾಗುತ್ತಿರುವುದರಿಂದ ಶುಕ್ರವಾರ ಜುಲೈ 26ರಂದು ಶಾಲಾ-PUCಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಸೀಲ್ದಾರರ ರಶ್ಮಿ ಆದೇಶ ಹೊರಡಿಸಿದ್ದಾರೆ.