ದೆಹಲಿ: ದೆಹಲಿಯ ಹಲವೆಡೆ ಪ್ರವಾಹದ ಸ್ಥಿತಿ ಉಂಟಾಗಿದ್ದು, ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿವೆ. ನೆಲಮಹಡಿ ತುಂಬ ನೀರುತ್ತಿದ್ದು, ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ವಿದ್ಯಾರ್ಥಿಯೊಬ್ಬರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ರಾಜೇಂದ್ರ ನಗರದಲ್ಲಿ ಭಾರಿ ಪ್ರವಾಹದ ಸ್ಥಿತಿ ಉಂಟಾಗಿದೆ. ಇದರಿಂದಾಗಿ, ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌ ಸ್ಟಡಿ ಸರ್ಕಲ್‌ನ ನೆಲಮಹಡಿಗೆ ನೀರು ನುಗ್ಗಿದೆ. ಸಂಜೆ 7.19ಕ್ಕೆ ಏಕಾಏಕಿ ನೀರು ನುಗ್ಗಿದ ಕಾರಣ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಇವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ಶವ ಪತ್ತೆಯಾಗಿವೆ. ಈಗ ಮತ್ತೊಬ್ಬ ವಿದ್ಯಾರ್ಥಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿದುಬಂದಿದೆ.

ಮೂವರು ವಿದ್ಯಾರ್ಥಿಗಳು ಕೂಡ ಐಎಎಸ್‌ ಅಧಿಕಾರಿಯಾಗುವ ಕನಸು ಕಂಡಿದ್ದರು. ಮೃತಪಟ್ಟಿರುವ ಇಬ್ಬರು ವಿದ್ಯಾರ್ಥಿನಿಯರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ತಡರಾತ್ರಿಯಾದರೂ ಮತ್ತೊಬ್ಬ ವಿದ್ಯಾರ್ಥಿಯ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.