ದೆಹಲಿ : ರೈಲ್ವೇ ರಿಕ್ರೂಟ್‌ಮೆಂಟ್ ಬೋರ್ಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿನಿಸಿದೆ ಬರೋಬ್ಬರಿ 7,951 ಜೂನಿಯರ್ ಎಂಜಿನಿಯರ್, ಕೆಮಿಕಲ್ ಸೂಪರ್‌ವೈಸರ್ ಹುದ್ದೆಗಳು ಇದಾಗಿದ್ದು, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಜುಲೈ 30ರಿಂದ ಅರ್ಜಿ ಸಲ್ಲಿಬೇಕಿದ್ದು, ಕೊನೆಯ ದಿನ ಆಗಸ್ಟ್ 29
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ:
ಕೆಮಿಲ್ ಮೇಲ್ವಿಚಾರಕ / ಸಂಶೋಧನೆ ಮತ್ತು ಮೆಟಲರ್ಜಿಕಲ್ ಮೇಲ್ವಿಚಾರಕ / ಸಂಶೋಧನೆ 17 ಹುದ್ದೆ, ವಿದ್ಯಾರ್ಹತೆ: ಕೆಮಿಕಲ್ ಟೆಕ್ನಾಲಜಿ, ಮೆಟಲರ್ಜಿ ಎಂಜಿನಿಯರಿಂಗ್‌ನಲ್ಲಿ ಪದವಿ.
ಕಿರಿಯ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಹಾಗೂ ಮೆಟಲರ್ಜಿಕಲ್ ಅಸಿಸ್ಟೆಂಟ್ 7,934 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಇಂಜಿನಿಯರಿಂಗ್, ಬಿ.ಎಸ್‌ಸಿ, ಪದವಿ.ವಯೋಮಿತಿ:
ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 36 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಯುರ್ & ಇಡಬ್ಲ್ಯುಎಸ್) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://www.rrbapply.gov.in/)
ಹೆಸರು ನೋಂದಾಯಿಸಿ ಲಾಗಿನ್ ಆಗಿ.
ಇಲ್ಲಿ ಕಂಡುಬರುವ ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ. ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ವಿಳಾಸ: indianrailways.gov.inಗೆ ಭೇಟಿ ನೀಡಿ ಅಥವಾ ಹೆಲ್ಪ್‌ಲೈನ್ ನಂಬರ್: Helpline No: 9592001188, 01725653333ಕ್ಕೆ ಕರೆ ಮಾಡಿ.