ಸೇನ್: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ.
ಭಾರತದ ಮನು ಭಾಕರ್ ಅವರು ಮಹಿಳಾ ವಿಭಾಗದ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಭಾರತ ಮೊದಲ ಖಾತೆ ತೆರೆದಿದೆ.
22 ವರ್ಷದ ಮನು ಭಾಕರ್ 221.7 ಅಂಕ ಗಳಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ. ರಿಪಬ್ಲಿಕ್ ಆಫ್ ಕೊರಿಯಾದ ಓ ಯೆ ಜಿನ್ ಅವರು 243.2 ಅಂಕ ಗಳಿಸುವ ಮೂಲಕ ಚಿನ್ನ ಗೆದ್ದಿದ್ದು, ಅವರ ಎದುರಾಳಿ ಕಿಮ್ ಯೆಜಿ 241.3 ಅಂಕ ಗಳಿಸುವ ಮೂಲಕ ಬೆಳ್ಳಿ ಗೆದ್ದಿದ್ದಾರೆ.
ಈ ಮೂಲಕ ಹರಿಯಾಣ ಮೂಲದ ಮನು ಭಾಕರ್ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ. ಏರ್ ಪಿಸ್ತೂಲ್ ವಿಭಾಗದಲ್ಲಿ ಪದಕ ಗೆಲ್ಲುವ ಭಾರತದ 12 ವರ್ಷದ ಕನಸು ನನಸಾದಂತಾಗಿದೆ.